| 
⚡ ಮುಖ್ಯಾಂಶಗಳು
🔔 ವೇದ ಕನ್ನಡ ನ್ಯೂಸ್ ಪೋರ್ಟಲ್‌ಗೆ ಸ್ವಾಗತ! ತಾಜಾ ಸುದ್ದಿಗಳಿಗಾಗಿ ನಮ್ಮೊಂದಿಗೆ ಇರಿ.

ಬೆಳಕು ಫೌಂಡೇಶನ್‌ನಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ: ಕವಿಗಳಿಗೆ ಸನ್ಮಾನ, ಕಟ್ಟಡ ಕಾರ್ಮಿಕರ ಹಿತರಕ್ಷಣೆಗೆ ಮುಖಂಡರ ಆಗ್ರಹ.

ಧಾರವಾಡ: ನಗರದಲ್ಲಿ ಬೆಳಕು ಫೌಂಡೇಶನ್ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ 'ವೇದ ಕನ್ನಡ ನ್ಯೂಸ್' ಜೊತೆ ಮಾತನಾಡಿದ ಬೆಳಕು ಫೌಂಡೇಶನ್ ಸಂಸ್ಥಾಪಕಿ ಜ್ಯೋತಿ ಪತ್ತಾರ ಅವರು, "ಮೊದಲ ವರ್ಷದ ರಾಜ್ಯೋತ್ಸವ ಅಂಗವಾಗಿ ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲಿಂಗರಾಜ ಅಂಗಡಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ನಾಡಿನ 5 ಮಂದಿ ಕವಿಗಳನ್ನು ಗೌರವಿಸಿ ಸನ್ಮಾನಿಸಲಾಗಿದೆ. ಕವಿಗಳ ಮೂಲಕ ಜನರಲ್ಲಿ ಕನ್ನಡದ ಕಂಪು ಹಾಗೂ ಅಭಿಮಾನ ಮೂಡಿಸುವ ಸದುದ್ದೇಶ ನಮ್ಮದಾಗಿದೆ," ಎಂದು ತಿಳಿಸಿದರು.

ಕಾರ್ಮಿಕರ ಹಿತರಕ್ಷಣೆಗೆ ಒಕ್ಕೂಟದ ಪಣ: ಒಕ್ಕೂಟದ ಮುಖಂಡರು ಶಿವಾನಂದ ಅಸೂಟಿ ಅವರು ಮಾತನಾಡಿ, "ಕಟ್ಟಡ ಕಾರ್ಮಿಕರಿಗೆ ಯಾವುದೇ ಅನ್ಯಾಯವಾದಲ್ಲಿ ಅಥವಾ ಸೌಲಭ್ಯಗಳು ಸಿಗದಿದ್ದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕಾರ್ಮಿಕರಿಗೆ ನ್ಯಾಯ ಕೊಡಿಸಲಾಗುವುದು ಎಂದು ತಿಳಿಸಿದರು.

ಧಾರವಾಡ ಜಿಲ್ಲಾ ಕಾರ್ಮಿಕ ಘಟಕದ ಜಿಲ್ಲಾ ಕಾರ್ಯಧ್ಯಕ್ಷರು: ಶ್ರೀ ಲಕ್ಷ್ಮಣ ಸಿ ರಾಜಾಪೂರ ಧಾರವಾಡ ಜಿಲ್ಲಾ ಕಾರ್ಮಿಕ ಘಟಕದ ಜಿಲ್ಲಾ ಕಾರ್ಯಧ್ಯಕ್ಷರು ಮಾತನಾಡಿ ಕಾರ್ಮಿಕ ಇಲಾಖೆಯಲ್ಲಿ ಬೋಗಸ್ ಕಾರ್ಡ್‌ಗಳನ್ನು ಪತ್ತೆಹಚ್ಚಿ, ನೈಜ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ತಲುಪುವಂತೆ ಮಾಡಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉತ್ತಮ ಹೆಜ್ಜೆ ಇಟ್ಟಿದ್ದಾರೆ . ಆದರೆ ಈ ಪ್ರಕ್ರಿಯೆಯಲ್ಲಿ ತಾಂತ್ರಿಕ ಕಾರಣಗಳಿಂದ ಅರ್ಹ ಕಾರ್ಮಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಮತ್ತು ಸೌಲಭ್ಯಗಳನ್ನು ತಕ್ಷಣ ಫಲಾನುಭವಿಗಳಿಗೆ ಮುಟ್ಟಿಸಬೇಕು," ಎಂದು ಒತ್ತಾಯಿಸಿದರು.ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.