| 
⚡ ಮುಖ್ಯಾಂಶಗಳು
🔔 ವೇದ ಕನ್ನಡ ನ್ಯೂಸ್ ಪೋರ್ಟಲ್‌ಗೆ ಸ್ವಾಗತ! ತಾಜಾ ಸುದ್ದಿಗಳಿಗಾಗಿ ನಮ್ಮೊಂದಿಗೆ ಇರಿ.

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡಿಗೆ ಸ್ಪರ್ಧೆಯಲ್ಲಿ ಶಲವಡಿಯ ಶ್ರೀ ಗುರುಶಾಂತೇಶ್ವರ ಪಿಯು ಕಾಲೇಜಿನ ಕುಮಾರಿ ಸಂಗೀತಾ ಮೇಟಿಗೆ ಚಿನ್ನದ ಪದಕ!.

ಸುದ್ದಿ ವಿವರ :ಧಾರವಾಡ (ವೇದ ಕನ್ನಡ ನ್ಯೂಸ್): ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಧಾರವಾಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ 2026-27ರಲ್ಲಿ ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದ ಶ್ರೀ ಗುರುಶಾಂತೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಂಗೀತಾ ಮೇಟಿ ಅವರು ನಡಿಗೆ (Walk) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ತೀವ್ರ ಪೈಪೋಟಿಯ ಬಾಲಕಿಯರ ವಿಭಾಗದ ನಡಿಗೆ ಸ್ಪರ್ಧೆಯಲ್ಲಿ ಅತ್ಯುತ್ತಮ ಕ್ರೀಡಾ ಕೌಶಲ್ಯ ಹಾಗೂ ಸತತ ಪರಿಶ್ರಮ ಪ್ರದರ್ಶಿಸಿದ ಸಂಗೀತಾ ಮೇಟಿ ಅವರು ಮೊದಲ ಸ್ಥಾನಗಳಿಸಿ ಕಾಲೇಜಿಗೆ ಹಾಗೂ ಇಡೀ ಅಣ್ಣಿಗೇರಿ ತಾಲೂಕಿಗೆ ಅಪಾರ ಕೀರ್ತಿ ತಂದಿದ್ದಾರೆ. ವಿಜೇತ ವಿದ್ಯಾರ್ಥಿನಿಗೆ ಕ್ರೀಡಾಕೂಟದ ಸಂಘಟಕರು ಹಾಗೂ ಅತಿಥಿಗಳು ಪ್ರಶಸ್ತಿ ಪತ್ರ ಮತ್ತು ಚಿನ್ನದ ಪದಕ ನೀಡಿ ಗೌರವಿಸಿದರು. ಜಿಲ್ಲಾ ಮಟ್ಟದ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮುಂದಿನ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿರುವ ಕುಮಾರಿ ಸಂಗೀತಾ ಮೇಟಿ ಅವರಿಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜು ಸಲಹಾ ಸಮಿತಿ, ಸಿಬ್ಬಂದಿ ವರ್ಗದವರು, ಊರಿನ ಹಿರಿಯರು-ಗಣ್ಯರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದಲ್ಲೂ ಚಿನ್ನದ ಪದಕ ಗೆದ್ದು ಬರಲಿ ಎಂದು ಹಾರೈಸಿದ್ದಾರೆ.