| 
⚡ ಮುಖ್ಯಾಂಶಗಳು
🔔 ವೇದ ಕನ್ನಡ ನ್ಯೂಸ್ ಪೋರ್ಟಲ್‌ಗೆ ಸ್ವಾಗತ! ತಾಜಾ ಸುದ್ದಿಗಳಿಗಾಗಿ ನಮ್ಮೊಂದಿಗೆ ಇರಿ.
Showing posts with the label ಪಶ್ಚಿಮ ಪದವೀಧರ ಚುನಾವಣೆ

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ ಮತ ಎಣಿಕೆ: ಧಾರವಾಡ ಜಿಲ್ಲೆಯಲ್ಲಿ ಅ.26 ರಿಂದ 27 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಡಿಸಿ ಸ್ನೇಹಲ್ ಆರ್. ಆದೇಶ.

ಸುದ್ದಿ ವಿವರ: ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆಯ ಹಿನ್ನೆಲೆಯಲ್ಲಿ, ಧಾರವಾಡ ಜಿಲ್ಲೆಯಾದ್ಯಂತ ಅಕ್ಟೋಬರ್ 26 ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 27 ರ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯಪಾನ ಹಾಗೂ ಮದ್ಯ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ನೇಹಲ್ ಆರ್. ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 27 ರಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಹಾಗೂ ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಬಾರ್, ಕ್ಲಬ್, ಡಿಪೋಗಳು ಕಡ್ಡಾಯ ಬಂದ್: ಆದೇಶದ ಅನ್ವಯ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಭಾರತೀಯ ತಯಾರಿಕಾ ಮದ್ಯದ ಅಂಗಡಿಗಳು (MSIL ಸೇರಿದಂತೆ), ಬೀಯರ್ ಬಾರ್‌ಗಳು, ವೈನ್ ಶಾಪ್‌ಗಳು, ಕ್ಲಬ್‌ಗಳು ಮತ್ತು ಮದ್ಯದ ಡಿಪೋಗಳನ್ನು ಕಡ್ಡಾಯವಾಗಿ ಮುಚ್ಚತಕ್ಕದ್ದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಸ್ಥಳಗಳಲ್ಲಿ ಮದ್ಯ ಮಾರಾಟ, ಸೇವನೆ ಮತ್ತು ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಪರಿಸ್ಥಿತಿಗನುಗುಣವಾಗಿ ಸಾರ್ವಜನಿಕ ಶಾ...